Salmos 140

Líbrame del hombre malo

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ. ಯೆಹೋವನೇ, ಕೆಡುಕರಿಂದ ನನ್ನನ್ನು ಬಿಡಿಸು, ಬಲಾತ್ಕಾರಿಗಳಿಂದ ತಪ್ಪಿಸಿ ಕಾಪಾಡು. 2ಅವರು ಕೇಡು ಕಲ್ಪಿಸುತ್ತಾರೆ, ಯಾವಾಗಲೂ ಜಗಳವೆಬ್ಬಿಸುತ್ತಾರೆ. 3ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ, ಅವರ ತುಟಿಗಳ ಹಿಂದೆ ಹಾವಿನ ವಿಷವಿದೆ. ಸೆಲಾ 4ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು, ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ.

5ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ 6ನಾನು ಯೆಹೋವನಿಗೆ, “ನೀನೇ ನನ್ನ ದೇವರು, ಯೆಹೋವನೇ, ನನ್ನ ವಿಜ್ಞಾಪನೆಗೆ ಕಿವಿಗೊಡು, 7ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ, ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ, 8ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ, ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ 9ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು ಅವರ ತಲೆಯ ಮೇಲೆಯೇ ಬರಲಿ, 10ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.

11ಚಾಡಿಗಾರನು ದೇಶದಲ್ಲಿ ಉಳಿಯನು, ಕೇಡು ಬಲಾತ್ಕಾರಿಯನ್ನು ಹಿಂದಟ್ಟಿ ಕೆಡವಿಬಿಡುವುದು. 12ಯೆಹೋವನು ದೀನರ ವ್ಯಾಜ್ಯವನ್ನು ನಡೆಸುವನೆಂತಲೂ, ಬಡವರ ನ್ಯಾಯವನ್ನು ಸ್ಥಾಪಿಸುವನೆಂತಲೂ ಬಲ್ಲೆನು. 13ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರನ್ನು ಕೊಂಡಾಡುವರು, ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ಬದುಕುವರು.

¡Copiado!
Aa