Salmos 149

La alabanza en la congregación de los santos

1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ. 2ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. 3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.

4ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. 5ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. 6ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

7ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು; 8ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು. 9ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.

¡Copiado!
Aa