Salmos 67
Que los pueblos te alaben
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ 2ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. 3ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
4ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ 5ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 6ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ; 7ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
¡Copiado!
Aa