1 Corinthiens 3

Vous êtes encore charnels

1ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು. 2ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ. 3ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?

4ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ? 5ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ. 6ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.

7ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು. 8ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು. 9ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.

Christ, le seul fondement

10ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು. 11ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. 12ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ, 13ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.

14ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು. 15ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು.

Vous êtes le temple de Dieu

16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? 17ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ. 18ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” 19ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,” 20“ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ 21ಆದಕಾರಣ ಮನುಷ್ಯಮಾತ್ರದವರ ವಿಷಯದಲ್ಲಿ ಯಾರೂ ಹೊಗಳಿಕೊಳ್ಳದಿರಲಿ. ಯಾಕೆಂದರೆ ಸಮಸ್ತವೂ ನಿಮಗಾಗಿಯೇ ಇದೆ.

22ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ. 23ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರಿನವನು.

Copié !
Aa