Psaumes 113

Du lever du soleil jusqu'à son coucher

1ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ. 2ಈಗಿನಿಂದ ಯುಗಯುಗಕ್ಕೂ, ಯೆಹೋವನ ನಾಮವು ಕೀರ್ತಿಸಲ್ಪಡಲಿ. 3ಯೆಹೋವನ ನಾಮವು ಪೂರ್ವದಿಂದ, ಪಶ್ಚಿಮದವರೆಗೂ ಸ್ತುತಿಹೊಂದಲಿ.

4ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ. 5ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ, 6ಆಕಾಶವನ್ನೂ, ಭೂಮಿಯನ್ನೂ ನೋಡಲಿಕ್ಕೆ ಬಾಗುತ್ತಾನೆ.

7ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ. 8ಪ್ರಭುಗಳ ಜೊತೆಯಲ್ಲಿ, ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ. 9ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!

Copié !
Aa