Psalms 110
Sit at my right hand
1ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು. 2ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. 3ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.
4“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ. 5ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು. 6ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.
7ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.
Copied!
Aa