Psalms 12

The words of the Lord are pure

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ. 2ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ. 3ಯೆಹೋವನು ವಂಚನೆಯ ತುಟಿಗಳನ್ನೂ, ಬಡಾಯಿ ನಾಲಿಗೆಯನ್ನೂ ಕಡಿದುಬಿಡಲಿ.

4ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. 5ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ. 6ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.

7ಜನರಲ್ಲಿ ಎಲ್ಲೆಲ್ಲೂ ನೀಚರೇ ತುಂಬಿಕೊಂಡಿದ್ದರೂ, ಜನರೊಳಗೆ ದುಷ್ಟತ್ವ ಆಳ್ವಿಕೆಗೆ ಬಂದಿದ್ದರೂ, 8ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.

Copied!
Aa