1 Cronache 7
I figli di Issacar
1ಇಸ್ಸಾಕಾರನ ಮಕ್ಕಳು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಜನರು. 2ತೋಲನ ಮಕ್ಕಳಾದ, ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುವೇಲ್. ಇವರು ತೋಲನ ವಂಶದ ಕುಟುಂಬಗಳಲ್ಲಿ ಪ್ರಧಾನ ಪುರುಷರೂ, ರಣವೀರರೂ ಆಗಿದ್ದರು. ತೋಲ ವಂಶದವರ ಸಂಖ್ಯೆಯು ದಾವೀದನ ಕಾಲದಲ್ಲಿ ಇಪ್ಪತ್ತೆರಡು ಸಾವಿರದ ಆರುನೂರು. 3ಉಜ್ಜೀಯನ ಮಗ ಇಜ್ಯಹ್ಯಾಹ. ಇಜ್ಯಹ್ಯಾಹನ ಮಕ್ಕಳು ಮಿಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ. ಇವರು ಈ ಕುಟುಂಬದ ಗೋತ್ರಪ್ರಧಾನರು.
4ಇವರ ಹೆಂಡತಿ ಮಕ್ಕಳೂ, ಇವರ ಗೋತ್ರ ಕುಟುಂಬಗಳಿಗೆ ಸೇರುವ ಯುದ್ಧಭಟರು ಮತ್ತು ಹೆಂಡತಿ, ಮಕ್ಕಳು ಒಟ್ಟು ಮೂವತ್ತಾರು ಸಾವಿರ. 5ಇವರ ಗೋತ್ರ ಸಂಬಂಧಿಗಳಾದ ಇಸ್ಸಾಕಾರ್ಯರೆಲ್ಲರೂ ರಣವೀರರು. ಈ ಕುಟುಂಬದ ಬಹುಪಾಲು ಪುರುಷರು ಸೈನ್ಯದಲ್ಲಿ ಸೇವೆಮಾಡಲು ಯೋಗ್ಯರಾಗಿದ್ದರೆಂದು ತಮ್ಮನ್ನು ಅರ್ಪಿಸಿಕೊಂಡರು, ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟವರು ಒಟ್ಟು ಎಂಭತ್ತೇಳು ಸಾವಿರ ಮಂದಿ.
I figli di Beniamino
6ಬೆನ್ಯಾಮೀನನಿಗೆ ಬೆಳ, ಬೆಕೆರ್, ಯೆದೀಯಯೇಲ್ ಎಂಬ ಮೂರು ಮಕ್ಕಳಿದ್ದರು. 7ಬೆಳನ ಮಕ್ಕಳು ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ ಎಂಬವರು. ಈ ಐದು ಜನರು ಗೋತ್ರ ಪ್ರಧಾನರು ರಣವೀರರೂ ಆಗಿದ್ದರು. ಅವರ ವಂಶಾವಳಿಯ ಪಟ್ಟಿಯಲ್ಲಿ ಇಪ್ಪತ್ತೆರಡು ಸಾವಿರದ ಮೂವತ್ತನಾಲ್ಕು ಜನರೆಂದು ಲೆಕ್ಕಿಸಲ್ಪಟ್ಟವರು. 8ಬೆಕೆರನ ಮಕ್ಕಳು ಜೆಮೀರ್, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್ ಮತ್ತು ಆಲೆಮೆತ್ ಎಂಬವರು.
9ರಣವೀರರಾದ ಈ ಗೋತ್ರಪ್ರಧಾನರ ವಂಶಾವಳಿಯ ಪಟ್ಟಿಯಲ್ಲಿ ಲೆಕ್ಕಿಸಲ್ಪಟ್ಟ ಇಪ್ಪತ್ತು ಸಾವಿರದ ಇನ್ನೂರು ಯುದ್ಧ ಪರಾಕ್ರಮಶಾಲಿಗಳು. 10ಯೆದೀಯಯೇಲನ ಮಗ ಬಿಲ್ಹಾನ್. ಬಿಲ್ಹಾನನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು. 11ಈ ಗೋತ್ರ ಪ್ರಧಾನರಿಗೆ ಸೇರಿದವರೆಲ್ಲರೂ ಯೆದೀಯಯೇಲನ ಸಂತಾನದವರು. ಇವರಲ್ಲಿ ಹದಿನೇಳು ಸಾವಿರದ ಇನ್ನೂರು ಯುದ್ಧದಲ್ಲಿ ಹೋರಾಡತಕ್ಕ ಪರಾಕ್ರಮ ಶಾಲಿಗಳು.
12ಶುಪ್ಪೀಮ್ ಮತ್ತು ಹುಪ್ಪೀಮರು ಈರನ ಮಕ್ಕಳು. ಹುಶೀಮನು ಅಹೇರನ ಮಗ.
I figli di Neftali
13ನಫ್ತಾಲಿಯ ಮಕ್ಕಳು ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಸಂತಾನದವರು.
I figli di Manasse
14ಮನಸ್ಸೆಯ ಸಂತಾನದವರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಷ್ರೀಯೇಲ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ. 15ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮ್ಯರಿಂದ ಹೆಣ್ಣನ್ನು ತೆಗೆದುಕೊಂಡನು. ಅವನ ತಂಗಿಯ ಹೆಸರು ಮಾಕ. ಅವನ ತಮ್ಮನ ಹೆಸರು ಚೆಲೋಫಾದ್. ಚೆಲೋಫಾದನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. 16ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಅವನಿಗೆ ಪೆರೇಷ್ ಎಂದು ಹೆಸರಿಟ್ಟಳು. ಇವನ ತಮ್ಮನ ಹೆಸರು ಶೆರೆಷ್. ಶೆರೆಷನ ಮಕ್ಕಳು ಊಲಾಮ್ ಮತ್ತು ರೆಕೆಮ್.
17ಉಲಾಮನ ಮಗನು ಬೆದಾನ್. ಇವರು ಮನಸ್ಸೆಯ ಮೊಮ್ಮಗ ಹಾಗೂ ಮಾಕೀರನ ಮಗ. ಇವರು ಗಿಲ್ಯಾದನ ಸಂತಾನದವರು. 18ಗಿಲ್ಯಾದನ ತಂಗಿಯಾದ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬವರನ್ನು ಹೆತ್ತಳು. 19ಶೆಮೀದನ ಮಕ್ಕಳು ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್.
I figli di Efraim
20ಎಫ್ರಾಯೀಮನ ಸಂತಾನದವರು: ಎಫ್ರಾಯೀಮನ ಮಗ ಶೂತೆಲಹ, ಇವನ ಮಗ ಬೆರೆದ್. ಬೆರೆದನ ಮಗ ತಹತ್; ಇವನ ಮಗ ಎಲ್ಲಾದ್. ಎಲ್ಲಾದನ ಮಗ ತಹತ್; 21ತಹತನ ಮಗ ಜಾಬಾದ್, ಜಾಬಾದನ ಮಕ್ಕಳು ಶೂತೆಲಹ, ಏಜೆರ್ ಮತ್ತು ಎಲ್ಲಾದ್. ಇವರು ಗತ್ ಊರಿನವರ ದನಕುರಿಗಳನ್ನು ಸುಲಿಗೆ ಮಾಡುವುದಕ್ಕೋಸ್ಕರ ಗಟ್ಟಾ ಇಳಿದು ಅವರ ದೇಶಕ್ಕೆ ಹೋದುದರಿಂದ ಆ ದೇಶದ ಮೂಲ ನಿವಾಸಿಗಳು ಇವರನ್ನು ಕೊಂದುಹಾಕಿದರು. 22ಆದುದರಿಂದ ಇವರ ತಂದೆಯಾದ ಎಫ್ರಾಯೀಮನು ಬಹುದಿನಗಳವರೆಗೂ ದುಃಖಪಡುತ್ತಿದ್ದನು. ಅವನ ಸಹೋದರರು ಅವನನ್ನು ಸಂತೈಸುವುದಕ್ಕೋಸ್ಕರ ಬಂದರು.
23ಅವನು ತನ್ನ ಹೆಂಡತಿಯನ್ನು ಸಂಗಮಿಸಲು, ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಇದು ಅವನ ಕುಟುಂಬಕ್ಕೆ ಒದಗಿದ ಆಪತ್ತಿನಲ್ಲಿ ಸಂಭವಿಸಿದ್ದರಿಂದ ಆ ಮಗನಿಗೆ ಬೆರೀಯ ಎಂದು ಹೆಸರಿಟ್ಟನು. 24ಶೇರ ಎಂಬವಳು ಅವನ ಮಗಳು. ಈಕೆಯು ಮೇಲಣ ಮತ್ತು ಕೆಳಗಣ ಬೇತ್ ಹೊರೋನ್ ಎಂಬ ಪಟ್ಟಣಗಳನ್ನು ಮತ್ತು ಉಜ್ಜೀನ್ ಶೇರ ಎಂಬ ಪಟ್ಟಣಗಳನ್ನೂ ಕಟ್ಟಿಸಿದಳು. 25ಬೆರೀಯ ಮಗ ರೆಫಹ. ಇವನ ಮಗ ರೆಷೆಫ್, ಇವನ ಮಗ ತೆಲಹ, ಇವನ ಮಗ ತಹಾನ್.
26ತಹಾನನ ಮಗ ಲದ್ದಾನ್, ಇವನ ಮಗ ಅಮ್ಮೀಹೂದ್, ಇವನ ಮಗ ಎಲೀಷಾಮ. 27ಎಲೀಷಾಮ ಮಗ ನೋನ್, ಇವನ ಮಗ ಯೆಹೋಷುವ. 28ಅವರು ವಾಸಿಸುವ ಸ್ವತ್ತಿನ ಮೇರೆಗಳು ದಕ್ಷಿಣ ದಿಕ್ಕಿನಲ್ಲಿ ಬೇತೇಲ್ ಪಟ್ಟಣ, ಅದರ ಗ್ರಾಮಗಳೂ ಪೂರ್ವ ದಿಕ್ಕಿನಲ್ಲಿ ನಾರಾನ್, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್ ಪಟ್ಟಣವೂ ಅದರ ಗ್ರಾಮಗಳೂ; ಉತ್ತರ ದಿಕ್ಕಿನಲ್ಲಿ ಶೆಕೆಮ್ ಮತ್ತು ಆಯಾ ಪಟ್ಟಣಗಳೂ ಅವುಗಳ ಗ್ರಾಮಗಳು.
29ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳೂ, ಅವುಗಳ ಗ್ರಾಮಗಳೂ ಮನಸ್ಸೆ ಕುಲದವರ ವಶದಲ್ಲಿದ್ದವು. ಈ ಊರುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸಿಸುತ್ತಿದ್ದರು.
I figli di Ascer
30ಅಶೇರನ ಸಂತಾನದವರು: ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರೂ ಸೆರಹಳೆಂಬ ಇವರ ತಂಗಿ. 31ಬೆರೀಯನ ಮಕ್ಕಳು ಹೆಬೆರ್, ಬಿರ್ಜೈತ್ ಊರಿನವರ ಮೂಲಪುರುಷನಾದ ಮಲ್ಕೀಯೇಲ್. 32ಹೆಬೆರನು ಯಫ್ಲೇಟ್, ಶೋಮೇರ್, ಹೋತಾಮ್ ಇವರನ್ನೂ ಇವರ ತಂಗಿಯಾದ ಶೂವಳನ್ನೂ ಪಡೆದನು.
33ಪಾಸಕ್, ಬಿಮ್ಹಾಲ್, ಅಶ್ವಾತ್ ಇವರು ಯಫ್ಲೇಟನ ಮಕ್ಕಳು. 34ಅಹೀ, ರೋಹ್ಗ, ಹುಬ್ಬ, ಅರಾಮ್ ಎಂಬುವವರು ಶಮೆರನ ಮಕ್ಕಳು. 35ಇವನ ತಮ್ಮನಾದ ಹೆಲೆಮನ ಮಕ್ಕಳು, ಚೋಫಹ, ಇಮ್ನ, ಶೇಲೆಷ್, ಆಮಾಲ್ ಇವರೇ.
36ಚೋಫಹನ ಮಕ್ಕಳು ಸೂಹ, ಹರ್ನೇಫೆರ್, ಶೂಗಾಲ್, ಬೇರೀ, ಇಮ್ರ, 37ಬೆಚೆರ್, ಹೋದ್, ಶಮ್ಮ, ಶಿಲ್ಷನು, ಇತ್ರಾನ್, ಬೇರ. 38ಯೆಫುನ್ನೆ, ಪಿಸ್ಪ, ಅರಾ ಎಂಬುವವರು ಯೆತೆರನ ಮಕ್ಕಳು.
39ಆರಹ, ಹನ್ನಿಯೇಲ, ರಿಚ್ಯ ಇವರು ಉಲ್ಲನ ಮಕ್ಕಳು. 40ಇವರೆಲ್ಲರು ಆಶೇರ್ಯರಲ್ಲಿ ಗೋತ್ರಪ್ರಧಾನರೂ, ಯುದ್ಧಪ್ರವೀಣರಾದ ರಣವೀರರೂ ಮತ್ತು ಶ್ರೇಷ್ಠ ನಾಯಕರೂ ಆಗಿದ್ದರು. ಇವರ ವಂಶಾವಳಿಯ ಪಟ್ಟಿಯ ಪ್ರಕಾರ ಯುದ್ಧ ಪ್ರವೀಣರಾದ ಭಟರ ಸಂಖ್ಯೆ ಇಪ್ಪತ್ತಾರು ಸಾವಿರ.