Salmi 121
Il mio aiuto viene dal Signore
1ಯಾತ್ರಾಗೀತೆ. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು? 2ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ. 3ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.
4ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ. 5ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ. 6ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.
7ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು. 8ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.
Copiato!
Aa