Salmi 130

Dal profondo grido a te

1ಯಾತ್ರಾಗೀತೆ. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. 2ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. 3ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?

4ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. 5ನಾನು ಯೆಹೋವನನ್ನು ಎದುರುನೋಡುತ್ತೇನೆ; ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ; ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ. 6ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ; ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ, ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.

7ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. 8ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.

Copiato!
Aa