Salmi 26
Esaminami, Signore
1ದಾವೀದನ ಕೀರ್ತನೆ. ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ. 2ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು. 3ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.
4ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ. 5ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ. 6ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ, 7ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.
8ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ. 9ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ. 10ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ.
11ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು. 12ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.