사무엘상 8
우리에게 왕을 주소서
1ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು. 2ಅವನ ಮೊದಲನೆಯ ಮಗನ ಹೆಸರು ಯೋವೇಲ್, ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಸ್ಥಾಪಕರಾಗಿದ್ದರು. 3ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.
4ಆದ್ದರಿಂದ ಇಸ್ರಾಯೇಲರ ಹಿರಿಯರೆಲ್ಲರೂ ಸೇರಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು 5ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು. 6ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇಮಿಸಿಕೊಡು ಎಂಬ ಅವರ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಿದನು.
7ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ. 8ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನ ವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ, ಹಾಗೆಯೇ ನಿನಗೂ ಮಾಡುತ್ತಾರೆ. 9ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟೆಂಬುದನ್ನು ಅವರಿಗೆ ತಿಳಿಸಿ, ಎಚ್ಚರಿಸು” ಎಂದು ಹೇಳಿದನು.
왕이 빼앗을 것들
10ಸಮುವೇಲನು ಅರಸನನ್ನು ನೇಮಿಸಿಕೊಡು ಎಂದು ಬೇಡಿಕೊಂಡ ಜನರಿಗೆ ಯೆಹೋವನ ಮಾತುಗಳನ್ನೆಲ್ಲಾ ತಿಳಿಸಿ ಅವರಿಗೆ, 11“ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು. 12ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ, ಕೆಲವರನ್ನು ಪಂಚಶತಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಕ್ಕೆ ಬೇಕಾದ ಆಯುಧ, ರಥಸಾಮಾಗ್ರಿಗಳನ್ನು ಮಾಡುವವರೂ ಆಗಬೇಕು.
13ಇದಲ್ಲದೆ ಅವನು ನಿಮ್ಮ ಹೆಣ್ಣುಮಕ್ಕಳನ್ನು ಸುಗಂಧದ್ರವ್ಯ ಮಾಡುವುದಕ್ಕೂ, ಅಡಿಗೆಮಾಡುವುದಕ್ಕೂ, ರೊಟ್ಟಿಸುಡುವುದಕ್ಕೂ ನೇಮಿಸಿಕೊಳ್ಳುವನು. 14ನಿಮ್ಮ ಉತ್ತಮವಾದ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು. 15ನಿಮ್ಮ ಧಾನ್ಯ, ದ್ರಾಕ್ಷಿಗಳಲ್ಲಿ ಹತ್ತರಷ್ಟನ್ನು ತೆಗೆದುಕೊಂಡು ತನ್ನ ಪ್ರಧಾನರಿಗೂ, ಪರಿವಾರದವರಿಗೂ ಕೊಡುವನು.
16ನಿಮ್ಮ ದಾಸದಾಸಿಯರನ್ನೂ, ಉತ್ತಮವಾದ ಎತ್ತು ಕತ್ತೆಗಳನ್ನೂ ತನ್ನ ಕೆಲಸ ಮಾಡುವುದಕ್ಕಾಗಿ ತೆಗೆದುಕೊಳ್ಳುವನು. 17ಕುರಿಹಿಂಡುಗಳಲ್ಲಿ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು. ನೀವು ಅವನಿಗೆ ದಾಸರಾಗಿರಬೇಕು. 18ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.
백성이 고집하다
19ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು; 20ನಾವು ಇತರ ಜನಾಂಗಗಳಂತೆ ಆಗಬೇಕು. ನಮ್ಮ ನ್ಯಾಯಗಳನ್ನು ತೀರಿಸಿ ನಮಗೆ ಮುಂದಾಗಿ ಹೊರಟು ನಮಗೋಸ್ಕರ ಯುದ್ಧಮಾಡುವ ಒಬ್ಬ ಅರಸನು ಬೇಕು” ಎಂದು ಹೇಳಿದರು. 21ಸಮುವೇಲನು ಜನರ ಈ ಎಲ್ಲಾ ಮಾತುಗಳನ್ನು ಯೆಹೋವನಿಗೆ ತಿಳಿಸಲಾಗಿ 22ಆತನು ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು” ಎಂದನು. ಆಗ ಸಮುವೇಲನು ಇಸ್ರಾಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ” ಎಂದು ಅಪ್ಪಣೆಕೊಟ್ಟನು.