스가랴 13

죄를 씻는 샘이 열리리라

1ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು. 2ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು. 3ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.

4“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು; 5ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು, 6ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’” ಎಂದು ಉತ್ತರ ಕೊಡುವನು.

목자를 치라

7ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ. 8“ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ. 9“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”

복사됨!
Aa