요한계시록 1

예수 그리스도의 계시

1ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು. 2ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು. 3ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ.

일곱 교회에 은혜가 있기를

4ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ 5ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ, 6ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.

7ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್. 8“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.

밧모섬의 환상

9ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು. 10ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು. 11ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.

12ನನ್ನ ಸಂಗಡ ಮಾತನಾಡುತ್ತಿದ್ದ ಶಬ್ದವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ 13ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. 14ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ, 15ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು. 17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ,ನಾನು ಮೊದಲನೆಯವನೂ, ಕಡೆಯವನೂ, 18ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.

19ಆದ್ದರಿಂದನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ. 20ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳದೂತರು, ಆ ಏಳು ದೀಪಸ್ತಂಭಗಳು ಅಂದರೆಆ ಏಳು ಸಭೆಗಳು.”

복사됨!
Aa