1 Coríntios 12

Dons do mesmo Espírito

1ಸಹೋದರರೇ ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ. 2ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ. 3ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.

4ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ. 5ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ. 6ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.

7ಆದರೆ ಪ್ರತಿಯೊಬ್ಬನಲ್ಲಿ ತೋರಿಬರುವ ದೇವರಾತ್ಮನ ವರಗಳು ಸರ್ವರ ಪ್ರಯೋಜನಕ್ಕಾಗಿ ಕೊಡಲ್ಪಟ್ಟಿವೆ. 8ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು 9ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು, 10ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.

11ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.

Um corpo, muitos membros

12ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ. 13ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು. 14ದೇಹವು ಒಂದೇ ಅಂಗವಲ್ಲ. ಅನೇಕ ಅಂಗಗಳುಳ್ಳದ್ದಾಗಿದೆ.

15ಕಾಲು “ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ? 16ಕಿವಿ “ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ? 17ದೇಹವೆಲ್ಲಾ ಕಣ್ಣಾದರೆ ನೀವು ಏನೂ ಕೇಳಲಾಗುತ್ತಿರಲಿಲ್ಲ. ದೇಹವೆಲ್ಲಾ ಕಿವಿಯಾದರೆ ನೀವು ಯಾವ ವಾಸನೆಯನ್ನು ಮೂಸಲಾಗುತ್ತಿರಲಿಲ್ಲ.

18ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ. 19ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವುದು? 20ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ.

21ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ. 22ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ? 23ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲಾ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ.

24ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ. 25ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. 26ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.

Buscai os maiores dons

27ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ. 28ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? 29ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ?

30ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ.

Copiado!
Aa