Salmos 125

Como os montes rodeiam Jerusalém

1ಯಾತ್ರಾಗೀತೆ. ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ. 2ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು. 3ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.

4ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು. 5ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.

Copiado!
Aa