以弗所书 3

奥秘被显明

1ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ. 2ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, 3ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.

4ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. 5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ. 6ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.

7ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. 8ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ 9ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.

10ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. 11ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ. 12ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.

13ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,

在爱中生根立基

14ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, 15ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. 16ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, 17ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.

18ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ 19ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.

已复制!
Aa