撒母耳记上 11
扫罗拯救基列雅比
1ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು. 2ಅದಕ್ಕೆ ಅವನು, “ಎಲ್ಲಾ ಇಸ್ರಾಯೇಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವುದಾದರೆ ನಿಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ” ಎಂದು ಉತ್ತರಕೊಟ್ಟನು. 3ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿನಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ, ನಾವು ನಿನ್ನ ಬಳಿಗೆ ಹೊರಟು ಬಂದು ನಿನಗೆ ಅಧೀನರಾಗುತ್ತೇವೆ” ಎಂದು ತಿಳಿಸಿದರು.
4ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು. 5ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಅವನು, “ಜನರು ಗೋಳಾಡುವುದಕ್ಕೆ ಕಾರಣವೇನು?” ಎಂದು ಕೇಳಲು ಅವರು ಅವನಿಗೆ ಯಾಬೇಷಿನವರ ವರ್ತಮಾನವನ್ನು ತಿಳಿಸಿದರು. 6ಆಗ ಯೆಹೋವನ ಆತ್ಮವು ಅವನ ಮೇಲೆ ಬಂದಿತು. ಅವನು ಬಹಳ ಕೋಪಗೊಂಡು, ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡು ತುಂಡು ಮಾಡಿದನು.
7ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿ, “ಯಾರು ಸೌಲ, ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳು ಹೀಗೆಯೇ ಕಡಿಯಲ್ಪಡುವವು” ಎಂದು ಹೇಳಿ ಕಳುಹಿಸಿದನು. ಯೆಹೋವನಿಗೆ ಭಯಪಟ್ಟು ಜನರೆಲ್ಲರೂ ಏಕಮನಸ್ಸಿನಿಂದ ಬೆಜೆಕಿನಲ್ಲಿ ಕೂಡಿಬಂದರು. 8ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು. 9ಅವರು ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ” ಎಂದು ಹೇಳಿ ಅವರನ್ನು ಕಳುಹಿಸಿದರು.
10ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಬಹಳವಾಗಿ ಸಂತೋಷಪಟ್ಟು ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮಗೆ ಸರಿ ಕಾಣುವ ಪ್ರಕಾರ ಮಾಡಿರಿ” ಎಂದು ಹೇಳಿದರು. 11ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.
在吉甲重立国
12ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದು ಎಂದು ಹೇಳಿದವರು ಯಾರು? ಅವರನ್ನು ನಮಗೆ ಒಪ್ಪಿಸಿರಿ; ನಾವು ಕೊಂದುಹಾಕುತ್ತೇವೆ” ಎಂದರು. 13ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು. 14ಸಮುವೇಲನು ಜನರಿಗೆ, “ಬನ್ನಿರಿ; ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಸ್ಥಿರಪಡಿಸೋಣ” ಅನ್ನಲು 15ಅವರೆಲ್ಲರೂ ಅಲ್ಲಿಗೆ ಹೋಗಿ ಯೆಹೋವನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಸ್ಥಿರಪಡಿಸಿ, ಯೆಹೋವನಿಗೆ ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ಸೌಲನೊಡನೆ ಬಹಳವಾಗಿ ಆನಂದಿಸಿದರು.