诗篇 129

他们屡次苦害我

1ಯಾತ್ರಾಗೀತೆ. “ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ. 2“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ. 3ಉಳುವವರು ನಮ್ಮ ಬೆನ್ನಿನ ಮೇಲೆ ಉಳುತ್ತಾ, ಉದ್ದವಾದ ಗೆರೆಗಳನ್ನು ಹಾಕಿದರು.” 4ಆದರೆ ನೀತಿಸ್ವರೂಪನಾದ ಯೆಹೋವನು, ದುಷ್ಟರು ಹಾಕಿದ ಬಂಧನಗಳನ್ನು ಛೇದಿಸಿಬಿಟ್ಟನು.

5ಚೀಯೋನನ್ನು ದ್ವೇಷಿಸುವವರೆಲ್ಲರೂ ಅವಮಾನದಿಂದ ಹಿಂದಿರುಗಲಿ. 6ಅವರು ಮಾಳಿಗೆಯ ಮೇಲಣ ಹುಲ್ಲಿನಂತಾಗಲಿ; ಅದು ಹೂವು ಬಿಡುವುದಕ್ಕೆ ಮೊದಲೇ ಒಣಗಿಹೋಗುತ್ತದೆ; 7ಅದನ್ನು ಕೊಯ್ಯುವವನ ಹಿಡಿಯೂ, ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.

8ಹಾದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ ಎಂದು, ಯೆಹೋವನ ನಾಮದಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ” ಎಂದೂ ಹೇಳುವುದಿಲ್ಲ.

已复制!
Aa