诗篇 2

耶和华的受膏者

1ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ? 2ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ, 3“ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.

4ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು. 5ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ, 6“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.

7ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. 8ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು. 9ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.

10ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ. 11ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ. 12ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.

已复制!
Aa